ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣು

Update: 2024-05-22 16:34 GMT

ಬೆಳ್ತಂಗಡಿ: ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣಾಗಿದ್ದಾರೆ.

ಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗುದ್ದರು. ಇದೀಗ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಹ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News