ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಪ್ಪ ಕಮಕನೂರ್ ಅವಿರೋಧ ಆಯ್ಕೆ

Update: 2023-06-23 15:06 GMT

ಬೆಂಗಳೂರು, ಜೂ.23: ವಿಧಾನಸಭೆಯಿಂದ ವಿಧಾನ ಪರಿಷತ್ತಿನಲ್ಲಿ ಖಾಲಿಯಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂ.30ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಳ್ಳಲು ಇಂದು(ಜೂ.23) ಅಂತಿಮ ದಿನವಾಗಿತ್ತು. ಯಾರೊಬ್ಬರೂ ನಾಮಪತ್ರ ಹಿಂಪಡೆದಿಲ್ಲ. ಅಲ್ಲದೆ, ಕಣದಲ್ಲಿ ಉಳಿದಿರುವುದು ಮೂವರೇ ಅಭ್ಯರ್ಥಿಗಳಾಗಿ ಆಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದ ನಂತರ ಜಗದೀಶ್ ಶೆಟ್ಟರ್ ಹಾಗೂ ಎನ್.ಎಸ್. ಬೋಸರಾಜು, ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News