ಚಿಕ್ಕಬಳ್ಳಾಪುರ | ಮಾರಕಾಸ್ತ್ರದಿಂದ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ
Update: 2025-01-04 06:35 GMT
ಚಿಕ್ಕಬಳ್ಳಾಪುರ : ಇಲ್ಲಿನ ತಮ್ಮನಾಯಕನಹಳ್ಳಿ ಗೇಟ್ ಬಳಿ ಮಾರಕಾಸ್ತ್ರದಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಯಾದ ಜೆಡಿಎಸ್ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಎಂದು ಗುರುತಿಸಲಾಗಿದೆ.
ವೆಂಕಟೇಶ್ ಅವರು, ರಿಯಲ್ ಎಸ್ಟೇಟ್ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದರು. ಇದೇ ವಿಚಾರದಲ್ಲಿ ಅಥವಾ ಹಳೇ ವೈಷಮ್ಯದಿಂದ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.