ಲೋಕಸಭಾ ಚುನಾವಣೆ : ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಇಂದು 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Update: 2024-04-03 14:04 GMT

ಚಿಕ್ಕಬಳ್ಳಾಪುರ : ಸಾರ್ವತ್ರಿಕ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಐದನೆಯ ದಿನವಾದ ಇಂದು ಒಟ್ಟು 10 ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಎಸ್.ರಕ್ಷಾ ರಾಮಯ್ಯ ಅವರು ಇಂದು ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸ್ ವಾದಿ) ಪಕ್ಷದ ಅಭ್ಯರ್ಥಿಯಾಗಿ ಮುನಿವೆಂಟಕಪ್ಪ .ಎಂ.ಪಿ., ದಿಗ್ವಿಜಯ ಭಾರತ ಪಾರ್ಟಿ ಅಭ್ಯರ್ಥಿಯಾಗಿ ಎಸ್. ನಾಗೇಶ್ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ಡಿ.ಚಿನ್ನಪ್ಪ, ಎಂ.ಆರ್. ರಂಗನಾಥ, ನಸುರುಲ್ಲಾ, ಮೋಹಿತ್ ನರಸಿಂಹಮೂರ್ತಿ, ಡಿ.ಸುಧಾಕರ, ದೇವರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಅವರು ಇದ್ದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ‌ https://affidavit.eci.gov.in ಪೋರ್ಟಲ್ ನಲ್ಲಿ ಆಪ್ ಲೋಡ್ ಮಾಡಲಾಗಿದೆ ಮತ್ತು ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡವಿಟ್ ಅನ್ನು ಪ್ರಚುರಪಡಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News