ರೈತರ ಮಕ್ಕಳಿಗೆ ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

Update: 2025-03-27 19:50 IST
  • whatsapp icon

ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ ೧೦ ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿದ್ದು, ಅರ್ಜಿ ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿದೆ. ಕನಿಷ್ಠ ೧೮ ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ ೩೦ ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ೩೩ ವಷರ್. ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸ್ಸಿನ ಮಿತಿ ೩೩ರಿಂದ ೬೫ ವಷರ್ವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಎಪ್ರಿಲ್ ೧ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿ- https://horticulturedir.karnataka.gov.in- ಇಲಾಖಾ ವೆಬ್‌ಸೈಟ್ ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

ಅರ್ಹ ಅಭ್ಯರ್ಥಿಗಳಿಗೆ ಎಪ್ರಿಲ್ ೮ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಎ.೧೬ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News