ಮಂಡ್ಯ | ಗಣೇಶ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ

Update: 2024-09-12 09:02 GMT

ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಾಟ ನಡೆದಿದೆ.  ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಆದರೆ ಪೊಲೀಸರಿಗೆ ಅಥವಾ ಸಾರ್ವಜನಿಕರಿಗೆ ಯಾವುದೇ ಗಾಯಗಳಾಗಿಲ್ಲ. ಘಟನೆಗೆ ಸಂಬಂಧಿಸಿ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಎಸ್ ಪಿ ಮಲ್ಲಿಕಾರ್ಜುನ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಟ್ಟಣದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ. ಭಯ ಭೀತರಾಗಿರುವ ಅಂಗಡಿ ಮಾಲಕರು ತಮ್ಮ ಅಂಗಡಿಗಳನ್ನು ಮುಚ್ಚಿದ್ದಾರೆ. ಔಷಧಿ ಅಂಗಡಿ ಸೇರಿದಂತೆ ಅತ್ಯವಶ್ಯಕ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿವೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲವು ವಾಹನಗಳ ಸಂಚಾರ ಮಾಮೂಲಿನಂತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News