ಮಂಡ್ಯ | ಅಪರಿಚಿತ ವಾಹನ ಢಿಕ್ಕಿ: ಬಾಲಕ ಮೃತ್ಯು
Update: 2025-04-17 18:41 IST

ಗಂಗಾಧರ್(16)
ಮಂಡ್ಯ : ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕು ಬಿದರಹೊಸಹಳ್ಳಿ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.
ಮೆಣಸಗೆರೆ ಗ್ರಾಮ ಪಂಚಾಯತ್ ಸದಸ್ಯೆ ಲಲಿತಾಂಬ ನಾಗರಾಜು ಅವರ ಪುತ್ರ ಗಂಗಾಧರ್(16) ಮೃತಪಟ್ಟ ಬಾಲಕ.
ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಬಿದರಹೊಸಹಳ್ಳಿ ಗೇಟ್ ಸಮೀಪ ಮಳವಳ್ಳಿ ಕಡೆಯಿಂದ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದ ರಭಸಕ್ಕೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಮೃತ ಬಾಲಕನ ಮೃತದೇಹವನ್ನು ಕೆ.ಎಂ.ದೊಡ್ಡಿ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ, ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ