ಮಂಡ್ಯ: 'ಪಾಕಿಸ್ತಾನ್ ಝಿಂದಾಬಾದ್' ಘೋಷಣೆ ಆರೋಪ; ಬಿಜೆಪಿ ಕಾರ್ಯಕರ್ತನ ಬಂಧನ

Update: 2024-03-05 06:15 GMT

ಮಂಡ್ಯ, ಮಾ.5: 2022ರ ಡಿಸೆಂಬರ್ 18 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು 'ಪಾಕಿಸ್ತಾನ್ ಝಿಂದಾಬಾದ್' ಕೂಗಿರುವ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಮಂಗಳವಾರ ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕ್ ವಿದೇಶಾಂಗ ಸಚಿವರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಝಿಂದಾಬಾದ್ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು, ಘೋಷಣೆ ಕೂಗುವಾಗ ಪಾಕಿಸ್ತಾನ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದರು ಎನ್ನಲಾಗಿದೆ.

ಒಂದೂವರೆ ವರ್ಷದ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕನ್ನಂಬಾಡಿ ಕುಮಾರ್ ಎಂಬವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ದೂರಿನನ್ವಯ ಬಿಜೆಪಿ ಕಾರ್ಯಕರ್ತರಾದ ರವಿ, ಶಿವಕುಮಾರ್ ಆರಾಧ್ಯ ಎಂಬವರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು, ಸದ್ಯ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News