ನಾಗಮಂಗಲ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ : ಚಲುವರಾಯಸ್ವಾಮಿ

Update: 2024-09-15 16:41 GMT

ಮಂಡ್ಯ : ನಾಗಮಂಗಲ ಪಟ್ಟಣ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿದ್ದು, ಗಣಪತಿ ವಿಸರ್ಜನಾ ಪೂಜಾ ಕಾರ್ಯಗಳಲ್ಲಿ ಮುಸ್ಲಿಂ ಬಾಂಧವರೂ ಭಾಗಿಯಾಗುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ರವಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎಲ್ಲ ಹಬ್ಬಗಳನ್ನು ಒಟ್ಟಾಗಿ ಆಚರಿಸಲು ಶಾಂತಿಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಎರಡು ಕೋಮಿನ ಜನರು ನಡೆದುಕೊಳ್ಳುತ್ತಿದ್ದಾರೆ. ಇಂದಿನ ಗಣಪತಿ ವಿಸರ್ಜನೆ ಪೂಜಾಕಾರ್ಯದಲ್ಲಿ ಭಾಗವಹಿಸಿದ್ದಾಗಿ ಮುಸ್ಲಿಂ ಮುಖಂಡರು ನನಗೆ ತಿಳಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ನಾಗಮಂಗಲದ ಮೆರವಣಿಗೆ ವೇಳೆ ನಡೆದ ಸಣ್ಣ ಜಗಳವನ್ನು ದುರುಪಯೋಗಪಡಿಸಿಕೊಂಡು ಅಂಗಡಿಗಳಿಗೆ ಬೆಂಕಿಹಚ್ಚಿದವರು, ಕಲ್ಲು ತೂರಾಟಕ್ಕೆ ಮುಂದಾದವರು ಯಾರೆಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅವರು ಹೇಳಿದರು.

ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಉನ್ನತ ಮಟ್ಟದ ತನಿಖೆ ನಡೆಸುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಸ್ತುತ ಪಟ್ಟಣದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಮುಖ್ಯ ಎಂದು ಅವರು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News