ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಒಡಕು ಮೂಡಿಸಲು ಕಾಂಗ್ರೆಸ್ ಯತ್ನ : ಎಚ್.ಡಿ.ಕುಮಾರಸ್ವಾಮಿ

Update: 2024-10-20 14:37 GMT

ಮಂಡ್ಯ : ಚನ್ನಪಟ್ಟಣ ಉಪಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸಲಾಗದ ಕಾಂಗ್ರೆಸ್ ನಾಯಕರು, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ

ರವಿವಾರ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪ್ರವಾಸದ ವೇಳೆ ಸೀತಾಪುರ ಗ್ರಾಮದಲ್ಲಿ ತಾವು ಬತ್ತದ ನಾಟಿ ಮಾಡಿದ್ದ ಬೆಳೆಯನ್ನು ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಮೈತ್ರಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಉಂಟಾದರೆ ಅದರ ಲಾಭ ಪಡೆಯುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆದರೆ, ನಾನು ಅದಕ್ಕೆ ಅವಕಾಶ ಕೊಡುವುದಿಲ್ಲʼ ಎಂದು ಹೇಳಿದರು.

ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಚಿಹ್ನೆಯಡಿ ನಮ್ಮ ಅಭ್ಯರ್ಥಿಯನ್ನು ನಿಲ್ಲಿಸಿದ್ದೆವು. ಅದೇ ಔದಾರ್ಯವನ್ನು ಬಿಜೆಪಿ ವರಿಷ್ಠರು ತೋರುತ್ತಾರೆ ಎಂದುಕೊಂಡಿದ್ದೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟಾರೆ, ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯ ಆಯ್ಕೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡುವುದಿಲ್ಲ. ಎರಡು ಮೂರು ದಿನದಲ್ಲಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಅವರ ಸ್ಪಷ್ಟಪಡಿಸಿದರು.

ಮಾಜಿ ಸಚಿವ ಸಿ ಎಸ್ ಪುಟ್ಟರಾಜು, ಶಾಸಕರಾದ ಎಚ್.ಟಿ. ಮಂಜು ಬಿ. ವಿವೇಕಾನಂದ, ಇತರ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News