ಕಸ ಎತ್ತುವ ಟೆಂಡರ್‌ನಲ್ಲೂ 15 ಸಾವಿರ ಕೋಟಿ ರೂ. ಕಿಕ್‌ಬ್ಯಾಕ್ : ಡಿಕೆಶಿ ವಿರುದ್ಧ ಎಚ್‌ಡಿಕೆ ಆರೋಪ

Update: 2024-07-15 08:19 GMT

ಮಂಡ್ಯ : ಬೆಂಗಳೂರಿನಲ್ಲಿ ಕಸ ಎತ್ತಲು ಬ್ಲ್ಯಾಕ್‌ಲಿಸ್ಟ್‌ನಲ್ಲಿರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ. ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 15 ಸಾವಿರ ಕೋಟಿ ರೂ.ಕಿಕ್ ಬ್ಯಾಕ್ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.

ರವಿವಾರ ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಜೆಡಿಎಸ್‌ ಆಯೋಜಿಸಿದ್ದ ಬೃಹತ್ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಸುಮಾರು 1,100 ರೈತರು ಆತ್ಮಹತ್ಯೆ ಮಾಡಿಕೊಡಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ. ನುಂಗಿ ಕಾಂಗ್ರೆಸ್‌ನವರು ರಾಜಾರೋಷವಾಗಿ ಓಡಾಡುವ ಬಂಡತನ ಪ್ರದರ್ಶನ ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಯವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಸಿ.ಎಸ್ .ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್,ಕೆ.ಸಿ.ನಾರಾಯಣಗೌಡ, ಶಾಸಕ ಎಚ್.ಟಿ. ಮಂಜು, ಮಾಜಿ ಶಾಸಕರಾದ ಕೆ.ಅನ್ನದಾನಿ, ಜಿ.ಬಿ.ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್. ಎಸ್.ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಮನ್‌ಮುಲ್ ರಾಮಚಂದ್ರು, ನಲ್ಲಿಗೆರೆಬಾಲು, ಅಮರಾವತಿ ಚಂದ್ರಶೇಖ‌ರ್, ಇತರ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News