ಕೆರಗೋಡು ಧ್ವಜಸ್ತಂಭ ವಿಚಾರ: ಸಾಮಾಜಿಕ ಜಾಲತಾಣಗಳ ಮೇಲೆ ಮಂಡ್ಯ ಜಿಲ್ಲಾಡಳಿತದಿಂದ ತೀವ್ರ ನಿಗಾ

Update: 2024-02-02 10:41 GMT

ಸಾಂದರ್ಭಿಕ ಚಿತ್ರ (PTI)

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದ್ದು, ಸಮಾಜದ ಸ್ವಾಸ್ಥ್ಯಕ್ಕೆ ಭಂಗ ತರುವ ಸಮಾಜಿಕ ಜಾಲತಾಣದ ಪೋಸ್ಟ್ ಗಳ ಮೇಲೆ ಜಿಲ್ಲಾಡಳಿತ  ನಿಗಾ ವಹಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್. ಯತೀಶ್ ಅವರು ಪ್ರಕಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಾದ‌ ಎಕ್ಸ್, ಫೇಸ್‌ ಬುಕ್, ವಾಟ್ಸಾಪ್, ಇನ್ಟಾಗ್ರಾಂ, ಯುಟ್ಯೂಬ್ ಇತ್ಯಾದಿಗಳಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ  ಭಂಗ ತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉಧ್ರೇಕಕಾರಿ ಭಾಷಣಗಳನ್ನು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸುವವರ ಹಾಗೂ ಇದಕ್ಕೆ ಪ್ರಚೋದನೆ ನೀಡುವಂತವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವದು ಎಂದು ಅವರು ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News