ಮಂಡ್ಯಕ್ಕೆ ಆಗಮಿಸುತ್ತಿದ್ದ ಮುತಾಲಿಕ್ ರನ್ನು ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ ಪೊಲೀಸರು

Update: 2024-09-21 17:35 GMT

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣದಲ್ಲಿ ಜಿಲ್ಲಾ ಕಾರಾಗೃಹದಲ್ಲಿರುವ ಸಂಘ ಪರಿವಾರದ ಕಾರ್ಯಕರ್ತರ ಭೇಟಿಗೆ ಆಗಮಿಸುತ್ತಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ಜಿಲ್ಲೆಯಲ್ಲಿ ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ್ದಾರೆ.

ಶನಿವಾರ ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸುತ್ತಿದ್ದ ಮುತಾಲಿಕ್ ಅವರನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯ ನಿಡಘಟ್ಟ ಗಡಿಯಲ್ಲಿ ತಡೆದ ಪೊಲೀಸರು, ಜಿಲ್ಲೆಗೆ ಪ್ರವೇಶ ನಿರ್ಬಂಧ ಆದೇಶದ ಹಿನ್ನೆಲೆಯಲ್ಲಿ ತಡೆದು ಹಿಂದಕ್ಕೆ ಕಳುಹಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮುತಾಲಿಕ್, ತಾನು ನಾಗಮಂಗಲಕ್ಕೆ ಹೋಗುತ್ತಿರಲಿಲ್ಲ. ಮಂಡ್ಯ ಜೈಲಿನಲ್ಲಿರುವ ಹಿಂದೂ ಯುವಕರಿಗೆ ಸಾಂತ್ವನ ಹೇಳಲು ಹೊರಟಿದ್ದೆ. ಆದರೆ, ಮಂಡ್ಯ ಜಿಲ್ಲಾಡಳಿತ ಅವಕಾಶ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಕಾಂಗ್ರೆಸ್ ಸರಕಾರದ ತುಷ್ಠೀಕರಣದ ಪರಿಣಾಮ ಹಿಂದೂಗಳ ಮೇಲೆ ದಾಳಿ ನಡೆಯುತ್ತಿವೆ ಎಂದು ಅವರು ಆರೋಪಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News