ಮುಡಾ, ವಾಲ್ಮೀಕಿ ಹಗರಣ | ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡದ್ದಕ್ಕೆ ಪಾದಯಾತ್ರೆ : ಆರ್.ಅಶೋಕ್

Update: 2024-08-09 16:14 GMT

ಮಂಡ್ಯ : ಮುಡಾ ನಿವೇಶನ ಹಂಚಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡದ ಕಾರಣ ಮೈಸೂರು ಚಲೋ ಪಾದಯಾತ್ರೆ ಮಾಡಬೇಕಾಯಿತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ‘ಭ್ರಷ್ಟ ಕಾಂಗ್ರೆಸ್ ಹಗರಣಗಳ ಸರಕಾರ’ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ದಾಖಲೆ ಸಹಿತ ವಿಧಾನಸಭೆಯಲ್ಲಿ ಹಗರಣದ ಬಗ್ಗೆ ಮಾತನಾಡಿದ್ದೇನೆ. ಆದರೆ, ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡದೆ ಸಿದ್ದರಾಮಯ್ಯ ಪಲಾಯನ ಮಾಡಿದರು ಎಂದು ಟೀಕಿಸಿದರು.

ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರ ನಡೆಸಿದ್ದಾರೆ ಎನ್ನುವ ಸಿದ್ದರಾಮಯ್ಯ ಅವರು ಸದನಲ್ಲಿ ದಾಖಲೆ ಬಿಡುಗಡೆ ಏಕೆ ಬಿಡುಗಡೆ ಮಾಡಲಿಲ್ಲ?. ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡದ ಮೇಲೆ ಜನಾಂದೋಲನ ಸಮಾವೇಶ ಅಗತ್ಯವೇನು? ಎಂದು ಅವರು ಪ್ರಶ್ನಿಸಿದರು.

ಬ್ರ್ಯಾಂಡ್ ಬೆಂಗಳೂರು, ಕಾಂಗ್ರೆಸ್ ಸರಕಾರದ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ಯುವಕರು, ಮಹಿಳೆಯರ ಮೇಲೆ ಹಲ್ಲೆ ಹೆಚ್ಚಾಗಿದೆ. ಕಾನೂರು ಸುವ್ಯವಸ್ಥೆ ಕುಸಿದಿದೆ. ಭ್ರಷ್ಟಾಚಾರ ಮಿತಿಮೀರಿದೆ. ಇದೆಲ್ಲವನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಚಂದ್ರಶೇಖರ್, ಶಾಸಕ ಛಲವಾದಿ ನಾರಾಯಣಸ್ವಾಮಿ, ಮಾಧ್ಯಮ ಸಂಚಾಲಕ ನಾಗೇಶ್, ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಕನಕಮೂರ್ತಿ, ನಾಗನಂದ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News