ಮೋದಿ ಎಂಬ ಬೋಗಸ್ ಕೃತಿ ಮಾರಾಟ : ಆಕ್ರೋಶ
ಮಂಡ್ಯ : ಅಕ್ಷರ ಜಾತ್ರೆ ಸಾಹಿತ್ಯ ಸಮ್ಮೇಳನದಲ್ಲಿ ಮತ್ತೊಂದು ವಿವಾದ ಪ್ರಾರಂಭವಾಗಿದೆ. ʼದಿವಾಳಿಯತ್ತ ಭಾರತʼ, ʼಮೋದಿ ಎಂಬ ಬೋಗಸ್ - ಸಿದ್ದುʼ ಎಂಬ ಬೋನಸ್ ಕೃತಿಯನ್ನು ಮಾರಾಟ ಮಾಡುತ್ತಿರುವುದು ಸಾಹಿತ್ಯಾಸಕ್ತಾರಿಂದ ವಿವಾದಕ್ಕೆ ಕಾರಣವಾಗಿದೆ.
ಸಾಹಿತ್ಯ ಸಮ್ಮೇಳನವನ್ನು ರಾಜಕೀಯ ಕಾದಾಟದ ಅಂಗಳವನ್ನಾಗಿ ಮಾಡಿಕೊಳ್ಳಬೇಡಿ ಎಂದು ಹಲವರು ಕಿಡಿ ಕಾರಿದ್ದಾರೆ. ರನ್ನರಾಜ ಕೃತಿ ಎಂಬ ಪ್ರಕಾಶನ ಹೊರತಂದಿರುವ ʼದಿವಾಳಿಯತ್ತ ಭಾರತʼ ಕೃತಿಗೆ 100 ರೂ. ಮುಖಬೆಲೆಯಿದ್ದು ಶೇ.50 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ.ಇಂದ್ರೇಶ್ ಮಳಿಗೆಗೆ ಭೇಟಿ ನೀಡಿ ತಮ್ಮ ಅಸಮಧಾನ ಹೊರಹಾಕಿದ್ದಾರೆ. ಬಳಿಕ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದು, ಅಂಗಡಿಯನ್ನು ಸಮ್ಮೇಳನದಿಂದ ತೆರವುಗೊಳಿಸಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ - ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ? ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನು ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು.
-ಆರ್.ಅಶೋಕ್, ವಿರೋಧ ಪಕ್ಷದ ನಾಯಕ