ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
Update: 2024-12-11 10:10 GMT
ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬುಧವಾರ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪಡೆದುಕೊಂಡರು.
ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಕೃಷ್ಣ ಅವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಗೆ ಸಿಎಂ ಆಗಮಿಸಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸಚಿವರಾದ ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಡಾ.ಜಿ.ಪರಮೇಶ್ವರ್, ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಡಾ.ಕೆ.ಸುಧಾಕರ್, ಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಕೃಷ್ಣ ಅವರ ಅಂತಿಮ ದರ್ಶನ ಪಡೆದುಕೊಂಡರು.