ಶ್ರೀರಂಗಪಟ್ಟಣ | ನದಿಯಲ್ಲಿ ಮುಳುಗಿ ಯುವಕ ಮೃತ್ಯು
Update: 2025-01-15 16:47 GMT
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಬಳಿಯ ಕಾವೇರಿ ನದಿಯಲ್ಲಿ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಜಿಲ್ಲೆಯ ನಾಗನಹಳ್ಳಿ ಗ್ರಾಮದ ನಿವಾಸಿ ಶಿವರಾಜು ಅವರ ಮಗ ಶ್ರೇಯಶ್ (19) ಮೃತ ಯುವಕ. ಈತ ಎಂಐಟಿ ಕಾಲೇಜಿನ ಪ್ರಥಮ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಬುಧವಾರ ಶ್ರೇಯಶ್ ತನ್ನ 3 ಮಂದಿ ಸ್ನೇಹಿತರೊಂದಿಗೆ ಬಲಮುರಿ ಬಳಿಯ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಈ ಅವಘಢ ಸಂಭವಿಸಿದೆ.
ಕೆಆರ್‌ಎಸ್ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನೊಂದಿಗೆ ಶ್ರೇಯಶ್ ಮೃತ ದೇಹವನ್ನು ನದಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ಬಳಿಕ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.