ಶ್ರೀರಂಗಪಟ್ಟಣ | ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮುಳುಗಿ ಮೃತ್ಯು
Update: 2025-04-05 18:42 IST

ಮಹೇಶ(35)
ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಹದೇವಪುರ ಗ್ರಾಮದ ಬಳಿ ಶನಿವಾರ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗಾಗೇನಹಳ್ಳಿ ಗ್ರಾಮದ ಮಹೇಶ(35) ಮೃತ ವ್ಯಕ್ತಿಯಾಗಿದ್ದು, ಮೃತದೇಹಕ್ಕಾಗಿ ಅಗ್ನಿಶಾಮಕ ದಳ, ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.
ಮಹೇಶ ಮೈಸೂರು ವಿಕ್ರಾಂತ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅರಕೆರೆ ಠಾಣಾ ಪಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ.