ಶ್ರೀರಂಗಟ್ಟಣ: ದಂಪತಿ ಆತ್ಮಹತ್ಯೆ
Update: 2024-06-05 05:36 GMT
ಮಂಡ್ಯ, ಜೂ.5: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿರುವ ಘಟನೆ ಶ್ರೀರಂಗಟ್ಟಣ ತಾಲೂಕಿನ ಕಿರಂಗೂರು ಗ್ರಾಮದಲ್ಲಿ ಘಟನೆ ನಡೆದಿರುವುದು ವರದಿಯಾಗಿದೆ.
ಗ್ರಾಮದ ಪ್ರಭಾವತಿ(40) ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಪತಿ ದಿಲೀಪ್(45) ಗ್ರಾಮದ ಹೊರವಲಯದ ಜಮೀನಿನ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಮೃತ ದಂಪತಿಗೆ ಹದಿಮೂರು ವರ್ಷದ ಮಗನಿದ್ದು, ಮೈಸೂರಿನ ಸುತ್ತೂರು ಮಠದಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದು ಬಂದಿದೆ.
ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.