ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಆಯೋಜಿಸಿದ್ದ ಮಂಡ್ಯ ಬಂದ್ ಯಶಸ್ವಿ

Update: 2025-01-07 09:27 GMT

ಮಂಡ್ಯ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಮಂಡ್ಯ ಬಂದ್ ಯಶಸ್ವಿಯಾಗಿದೆ.

ಬೆಳಗ್ಗೆಯಿಂದಲೇ ಪ್ರಗತಿಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಬೃಹತ್ ಬೈಕ್ ಜಾಥಾ ನಡೆಸಿದರು.

ಸಂಘಟಕರ ಮನವಿಗೆ ಸ್ಪಂದಿಸಿದ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದರು. ಅಮಿತ್ ಶಾ ಹೇಳಿಕೆಯನ್ನು ಉಗ್ರವಾಗಿ ಖಂಡಿಸಿದ ಪ್ರತಿಭಟನಾಕಾರರು, ಕೂಡಲೇ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News