ಮಣಿಪುರ: ಶಾಲೆಯ ಹೊರಗೆ ಮಹಿಳೆಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

Update: 2023-07-06 07:39 GMT

ಇಂಫಾಲ್: ಎರಡು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಮಧ್ಯೆ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಶಾಲೆಯ ಹೊರಗೆ ಅಪರಿಚಿತ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

2 ತಿಂಗಳ ಬಳಿಕ ನಿನ್ನೆಯಷ್ಟೇ ರಾಜ್ಯದಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದವು.  ಈ ಘಟನೆಯು ಪ್ರದೇಶದಲ್ಲಿ ಭೀತಿಯನ್ನು ಉಂಟು ಮಾಡಿದೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಪಾವೊ ಮತ್ತು ಅವಾಂಗ್ ಸೆಕ್ಮೈ ಪ್ರದೇಶದ ಎರಡು ಸಶಸ್ತ್ರ ಗುಂಪುಗಳ ನಡುವೆ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಘರ್ಷಣೆಗೆ ಅಡ್ಡಿಪಡಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News