ಲೋಕಸಭಾ ಚುನಾವಣೆ | ಎ.14ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

Update: 2024-04-11 17:34 GMT

ಮೈಸೂರು : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲು ಎಪ್ರಿಲ್ 14ರ ರವಿವಾರ ಮೈಸೂರು ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಎಪ್ರಿಲ್ 14ರಂದು ಸಂಜೆ 4 ಗಂಟೆ ಮೈಸೂರಿನ‌ ಮಹರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ಸಮಾವೇಶ ಮೈಸೂರು-ಕೊಡಗು, ಮಂಡ್ಯ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.

ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News