ಸಿಸಿಬಿ ಪೊಲೀಸರ ಕಾರ್ಯಾಚರಣೆ: 4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶ

Update: 2024-01-09 18:32 GMT

ಮೈಸೂರು: ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ರೂ.4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ.  ಹೆಬ್ಬಾಳ್ ದಲ್ಲಿರುವ ಕೆ.ಎಫ್.ಸಿ.ಐ.ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ತಡೆದಿದ್ದಾರೆ. ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಅಕ್ಕಿ ಮೂಟೆಯನ್ನು ವಶಪಡಿಸಿಕೊಂಡಿದ್ದಾರೆ.

ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನನ್ನೂ ಸಹ ವಶಕ್ಕೆ ಪಡೆಲಾಗಿದ್ದು, ಸ್ಥಳಕ್ಕೆ ಆಹಾರ ನಿರೀಕ್ಷಕರಾದ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಟಗಳ್ಳಿ ಠಾಣೆ ಇನ್ಸ್ ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಶಬರೀಶ್ ರವರು ಆರೋಪಿಯನ್ನ ವಿಚಾರಣೆಗೆ ಒಳಪಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್,ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಪೂವಯ್ಯ, ಪಿ.ಎಸ್.ಐ ಲೇಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News