ಬೆಳ್ತಂಗಡಿ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ರಕ್ಷಿತ್ ಶಿವರಾಂ ವಿರುದ್ಧ ದೂರು
Update: 2024-08-21 08:35 GMT
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ದೂರು ನೀಡಿರುವ ಬಗ್ಗೆ ವರದಿಯಾಗಿದೆ.
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನೀಡಲಾಗಿರುವ ದೂರಿನಲ್ಲಿ
ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.