ಚನ್ನಪಟ್ಟಣ ಉಪಚುನಾವಣೆ | ಹೈಕಮಾಂಡ್‌ನಿಂದ ಅಭ್ಯರ್ಥಿ ಆಯ್ಕೆ : ದಿನೇಶ್ ಗುಂಡೂರಾವ್

Update: 2024-06-22 13:17 IST
ಚನ್ನಪಟ್ಟಣ ಉಪಚುನಾವಣೆ | ಹೈಕಮಾಂಡ್‌ನಿಂದ ಅಭ್ಯರ್ಥಿ ಆಯ್ಕೆ : ದಿನೇಶ್ ಗುಂಡೂರಾವ್
  • whatsapp icon

ಮೈಸೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಎಂದು ಹೇಳಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ಬಳಿಕವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ" ಎಂದು ಹೇಳಿದರು.

ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇಲ್ಲ. ಪಕ್ಷ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News