ʼದುಷ್ಟರ ಸಂಹಾರ, ಶಿಷ್ಟರ ರಕ್ಷಣೆʼಯೇ ದಸರಾದ ಸಂಕೇತ : ಸಿಎಂ ಸಿದ್ದರಾಮಯ್ಯ
ಮೈಸೂರು: "ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದೆ. ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ" ಎಂದರು.
ʼರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿʼ ಎಂದು ತಿಳಿಸಿದರು.
ಮೈಸೂರು ದಸರಾದ ವಿಜಯದಶಮಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ ಸುತ್ತೂರು ಮಠಕ್ಕೆ ಭೇಟಿನೀಡಿ, ಪೂಜೆ ಸಲ್ಲಿಸಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದೆ. pic.twitter.com/ofVQypGKfq
— Siddaramaiah (@siddaramaiah) October 12, 2024