ಚಾಮುಂಡೇಶ್ವರಿ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನದ ವಿರೋಧ ವಿಚಾರ | ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಪ್ರತಾಪ್‌ ಸಿಂಹ

Update: 2024-09-11 11:43 GMT
ಪ್ರತಾಪ್‌ ಸಿಂಹ(PC:X/@mepratap)

ಮೈಸೂರು: "ಈ ಹಿಂದೆ ಬಿಜೆಪಿ ಸರಕಾರದಲ್ಲೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಬೇಕು ಎಂದು ಧ್ವನಿ ಎತ್ತಿದ್ದೆವು. ಆದರೆ ಸಿಎಂ ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ" ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಚಾಮುಂಡೇಶ್ವರಿ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನದ ವಿರೋಧ ವಿಚಾರದ ಕುರಿತು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,"ಸಿದ್ದರಾಮಯ್ಯ ಅವರನ್ನು ಕೆಲವು ಸೈದ‍್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಚಾಮುಂಡಿ ಬೆಟ್ಟದ ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಒಡೆದಾಟದ ಬಗ್ಗೆ ಮಾತನಾಡಲ್ಲ, ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರಕಾರದ ಕರ್ತವ್ಯ" ಎಂದರು.

ʼಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು.? ನಾನು ಹೇಳಿದರೆ ವಿವಾದ ಆಗುತ್ತೆ. ಪೈಪ್‌ ಲೈನ್ ಎಲ್ಲಿ ತಡೆದು ನಿಂತಿದೆ, ನೀವೇ ಹೋಗಿ ಹುಡುಕಿʼ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್ ಒಡೆಯರ್ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News