ಬಿಜೆಪಿ ಅಭ್ಯರ್ಥಿ ಯದುವೀರ್ ಅವರ ರೇಡಿಯೋ ಕಾರ್ಯಕ್ರಮದ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Update: 2024-03-26 07:23 GMT

Photo : facebook/Mirchi Hubballi Dharwad

ಮೈಸೂರು: ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ʼರಾಜರಿಂದಲೇ ರಾಜರ ಕಥೆಗಳುʼ ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ.

ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ದಿನಾಂಕ 26.04.2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News