ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿ ತಿರುಚುವ ಪ್ರಯತ್ನ ನನ್ನ ಗಮನಕ್ಕೆ ಬಂದಿಲ್ಲ: ದಿನೇಶ್ ಗುಂಡೂರಾವ್

Update: 2024-06-19 08:35 GMT

Photo: X/Dineshgundurao

ಮೈಸೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮರಣೋತ್ತರ ವರದಿ ತಿರುಚವ ಪ್ರಯತ್ನ ನಡೆಯುತ್ತಿದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಮಾತೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, " ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೆ. ತನಿಖೆಗೆ ಸರಕಾರ ಎಲ್ಲಾ ರೀತಿಯ ಸಹಕಾರ ಕೊಡುತ್ತಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂಬುದು ಎಲ್ಲರ ಬಯಕೆ" ಎಂದು ಹೇಳಿದರು.

ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು:

ʼಕೋಪದಲ್ಲಿ ಇಂತಹ ಘಟನೆಗಳು ಆಗುತ್ತವೆ, ಈ ಹಿಂದೆಯೂ ಆಗಿವೆ. ಸರಕಾರಗಳು ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾನೇ ಸರಿ, ನಾನು ಮಾಡಿದ್ದೇ ಸರಿ ಎನ್ನುವ ಅತಿರೇಕದ ವರ್ತನೆ ಜಾಸ್ತಿಯಾದಾಗ ಈ ರೀತಿಯ ಘಟನೆಗಳು ನಡೆಯುತ್ತವೆ. ಇಂತಹ ಘಟನೆಗಳು ಸಮಾಜಕ್ಕೆ ಒಳ್ಳೆಯದಲ್ಲʼ ಎಂದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರದ ಕುರಿತು ಮಾತನಾಡಿದ ಅವರು, ʼಬೇರೆ ರಾಜ್ಯಗಳಿಗೆ ಹೊಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಬೆಲೆ ಕಡಿಮೆ ಇದೆ. ಕೇಂದ್ರ ಸರಕಾರ ಈ ಹಿಂದೆ ಬೊಮ್ಮಾಯಿ ಮೇಲೆ ಒತ್ತಡ ತಂದು ಬೆಲೆ ಇಳಿಕೆ ಮಾಡಿದರು. ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಲಿಸಿದರೆ ನಮ್ಮಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಇದೆʼ ಎಂದು ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News