ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

Update: 2024-09-26 05:33 GMT

ಬೆಂಗಳೂರು, ಸೆ.26: ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಗುರುವಾರ ಆಹ್ವಾನಿಸಲಾಯಿತು.

ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿರುವ ಅಮೆರಿಕನ್ ಕಾಲನಿಯಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ಪೇಟ ತೋಡಿಸಿ, ಫಲಪುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಇದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News