ಮೈಸೂರು | ಗ್ಯಾಸ್ ಟ್ಯಾಂಕರ್-ಬೈಕ್ ನಡುವೆ ಢಿಕ್ಕಿ : ದಂಪತಿ ಸ್ಥಳದಲ್ಲೇ ಮೃತ್ಯು

Update: 2024-07-19 12:19 GMT

ಮೈಸೂರು : ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಢಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕೂರ್ಗಳ್ಳಿ ಬಳಿ ರಿಂಗ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ದಂಪತಿಗಳನ್ನು ಚಂದ್ರ ಹಾಗೂ ಪ್ರೇಮ ಎಂದು ಗುರುತಿಸಲಾಗಿದೆ. ದಂಪತಿಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟಕಾ ಸ್ಥಳಕ್ಕೆ ವಿವಿ ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News