ಮೈಸೂರು | ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್‌ನಿಂದ ಬಿದ್ದು ಮೃತ್ಯು

Update: 2024-12-07 16:40 GMT

ಸಾಂದರ್ಭಿಕ ಚಿತ್ರ

ಮೈಸೂರು : ಮೈಸೂರು ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಬಸ್ ಡೋರ್‌ನಿಂದ ಬಿದ್ದು ಮೃತ ಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ತಮಿಳುನಾಡು ಮೂಲದ ದೀನ್ ದಯಾಳ್ (21) ಮೃತ ವಿದ್ಯಾರ್ಥಿ. ಪಿರಿಯಾಪಟ್ಟಣ ತಾಲೂಕಿನ ಗೋಲ್ಡನ್ ಟೆಂಪಲ್ ವೀಕ್ಷಿಸಲು ಹೋಗುವ ವೇಳೆ ಈ ಅವಘಡ‌ ಸಂಭವಿಸಿದೆ.

ಬಸ್ಸಿನ ಬಾಗಿಲು ಲಾಕ್ ಆಗದ ಪರಿಣಾಮ ವಿದ್ಯಾರ್ಥಿ ದೀನ್ ದಯಾಳ್ ಕೆಳಗೆ ಬಿದ್ದಿದ್ದು, ಈ ವೇಳೆ ರಸ್ತೆಯ ಪಕ್ಕದಲ್ಲಿದ್ದ ಲೈಟ್ ಕಂಬಕ್ಕೆ ತಾಗಿ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ನಿರ್ವಾಹಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News