ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ ಅಜ್ಜ ಸೇರಿ ಇಬ್ಬರು ಮೊಮ್ಮಕ್ಕಳು ಮೃತ್ಯು
Update: 2025-03-15 20:54 IST

ಮೈಸೂರು: ನೀರಿನಲ್ಲಿ ಮುಳುಗಿದ ಇಬ್ಬರು ಮೊಮ್ಮಕ್ಕಳ ರಕ್ಷಣೆ ಮಾಡಲು ಹೋಗಿ ತಾತ ಕೂಡ ನೀರುಪಾಲಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.
ಮೃತರನ್ನು ಟಿ.ನರಸೀಪುರ ಪಟ್ಟಣದ ಹಳೇ ತಿರುಮಕೂಡಲು ನಿವಾಸಿಗಳಾದ ಚೌಡಯ್ಯ (70) ಭರತ್ (13) ಧನುಷ್ (10) ಎಂದು ಗುರುತಿಸಲಾಗಿದೆ.
ಇಬ್ಬರು ಮೊಮ್ಮಕ್ಕಳು ಕಾವೇರಿ ನದಿಯಲ್ಲಿ ನೀರಿನಲ್ಲಿ ಮುಳುಗಿರುವ ವಿಷಯ ತಿಳಿದು ಮೊಮ್ಮಕ್ಕಳ ರಕ್ಷಣೆಗೆ ಮುಂದಾಗಿ ರಕ್ಷಣೆ ಮಾಡಲು ಸಾಧ್ಯವಾಗದೆ ಚೌಡಯ್ಯ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.