ಮೈಸೂರು | ಸ್ಕೂಟರ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿ ಢಿಕ್ಕಿ: ಸ್ಥಳದಲ್ಲೇ ಪತ್ನಿ ಮೃತ್ಯು, ಪತಿಗೆ ಗಂಭೀರ ಗಾಯ

ಮೈಸೂರು : ಸ್ಕೂಟರ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿ ಢಿಕ್ಕಿಯಾಗಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ನಗರದಲ್ಲಿ ನಡೆದಿದೆ.
ಭವಾನಿ (35) ಮೃತಪಟ್ಟವರು. ಪತಿ ಮಹೇಶ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಗೆ ಲಾರಿ ಢಿಕ್ಕಿಯಾಗಿದ್ದು ಕೆಳಗೆ ಬಿದ್ದ ದಂಪತಿಗಳ ಮೇಲೆ ಲಾರಿ ಚಕ್ರ ಹರಿದಿದೆ. ಈ ವೇಳೆ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು:
ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೋವಿಂದ (34) ಮೃತ ವ್ಯಕ್ತಿ. ಅತಿ ವೇಗವಾಗಿ ಬಂದು ಗೋವಿಂದಗೆ ಕಾರು ಢಿಕ್ಕಿ ಹೊಡೆದಿದ್ದು, ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.