ಮೈಸೂರು | ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ

Update: 2024-01-31 14:52 GMT

 ಸಾಂದರ್ಭಿಕ ಚಿತ್ರ

ಮೈಸೂರು : ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪೆಡ್ಲರ್ ಗಳನ್ನ ಬಂಧಿಸಲಾಗಿದ್ದು ಆರೋಪಿಗಳಿಂದ 40 ಲಕ್ಷ ಮೌಲ್ಯದ 85 ಕೆಜಿ 730 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಒಡಿಸ್ಸಾ ಮೂಲದ ರಾಜಿಕ್ ಮಲ್ಲಿಕ್ ಹಾಗೂ ಆಂಧ್ರ ಮೂಲದ ಜಾಫರ್ ಬಂಧಿತರು. ಸಾತಗಳ್ಳಿ ಒಂದನೇ ಹಂತದಲ್ಲಿ ಬೊಲೆರೋ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ. ಒರಿಸ್ಸಾದಿಂದ ರೈಲಿನಲ್ಲಿ ಗಾಂಜಾ ತಂದು ಮೈಸೂರಿನಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್  ಸಿಸಿಬಿ ಇನ್‌ ಸ್ಪೆಕ್ಟರ್ ಎಂ.ಮೋಹನ್ ಕುಮಾರ್ ಹಾಗೂ ಸಿಬ್ಬಂದಿಗಳು  ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ. ಈ ಸಂಬಂಧ ಮೈಸೂರಿನ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಐ ಮೋಹನ್ ಕುಮಾರ್ ರವರ ತಂಡದ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News