ಮೈಸೂರು | ಕಲುಷಿತ ನೀರು ಸೇವನೆ: ಓರ್ವ ಮೃತ್ಯು,12 ಮಂದಿ ಅಸ್ವಸ್ಥ
Update: 2024-09-11 09:05 GMT
ಮೈಸೂರು, ಸೆ.11: ಕಲುಷಿತ ನೀರು ಸೇವನೆಯಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿ ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೋವಿಂದೆಗೌಡ (65) ಮೃತಪಟ್ಟವರು. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್ ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಮೃತ ಗೋವಿಂದೇಗೌಡ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಜನರ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ.