ಮೈಸೂರು ದಸರಾ: ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ

Update: 2024-09-26 06:29 GMT

ಮೈಸೂರು, ಸೆ.26: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಆಹ್ವಾನ ನೀಡಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ, ಮೈಸೂರು ಪೇಟ, ರೇಷ್ಮೆ ಶಾಲು, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಕೆ.ಆರ್.ನಗರ ವಿಧಾನಸಭಾ ಶಾಸಕ ಡಿ.ರವಿಶಂಕರ್, ಎಚ್.ಡಿ.ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕ ಡಾ.ಯತೀಂದ್ರ ಎಸ್., ಸಿ.ಎನ್.ಮಂಜೇಗೌಡ, ಡಾ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಓ ಕೆ.ಎಂ.ಗಾಯತ್ರಿ, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News