ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟ ಪ್ರಕರಣ; ಜಿಲ್ಲಾಧಿಕಾರಿ, ಜಿ.ಪಂ ಸಿಇಒ ವಿರುದ್ಧ ಕ್ರಮ ಜರುಗಿಸಲು ಆಗ್ರಹ

Update: 2024-05-23 09:58 GMT

ಮೈಸೂರು: ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಓರ್ವ ಯುವಕ ಮೃತಪಟ್ಟು, 48 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಎನ್‌.ಮಂಜೇಗೌಡ ಆಗ್ರಹಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಅಭಾವ, ಕಲುಷಿತ ನೀರಿನಿಂದ ಆಗುವ ಸಮಸ್ಯೆಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒ ಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪದೇ ಪದೇ ಎಚ್ಚರಿಕೆಯನ್ನು ನೀಡಿದ್ದಾರೆ. ಅದರೆ ಕೆ.ಸಾಲುಂಡಿ ಗ್ರಾಮದಲ್ಲಿ ಕುಲುಷಿತ ನೀರಿನಿಂದ ದೊಡ್ಡ ಸಮಸ್ಯೆಯೇ ಎದುರಾಗಿದೆ. ಹಾಗಿದ್ದ ಮೇಲೆ ಜಿಲ್ಲಾಧಿಕಾರಿ ಮತ್ತು ಜಿ.ಪಂ ಸಿಇಓ ಅವರ ಮೇಲೆ ಮೊದಲು ಕ್ರಮ ಜರುಗಿಸಿ ನಂತರ ಯಾರು ತಪ್ಪಿತಸ್ಥರಾಗಿದ್ದಾರೆ ಅವರನ್ನು ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಘಟನೆಗೆ ಸಂಬಂಧ ಯಾರೂ ರಾಜಕೀಯ ಮಾಡಬಾರದು. ಇದರಲ್ಲಿ ಕಲುಷಿತ ನೀರು ಸೇರಲು ಯಾರು ಕಾರಣ ಎನ್ನುವುದು ಕಣ್ಣಿಗೆ ಕಾಣಿಸುತ್ತಿದೆ. ಅಂತಹದರಲ್ಲಿ ದೊಡ್ಡ ಮಟ್ಟದ ತನಿಖೆ ಅದು ಇದು ಎಂದು ತಡಮಾಡದೆ ತಕ್ಷಣ ಕಾರಣರಾದವರನ್ನು ಅಮಾನತ್ತು ಮಾಡಬೇಕು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News