ಮೈಸೂರು | ದಸರಾ ಗಜಪಡೆಗಳ ಕಾದಾಟ: ರಸ್ತೆಯತ್ತ ಓಟ; ಸಾರ್ವಜನಿಕರಿಗೆ ದಿಗಿಲು

Update: 2024-09-21 10:14 GMT

ಮೈಸೂರು, ಸೆ.21: ಮೈಸೂರು ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆಗಳ ನಡುವೆ ಕಾದಾಟ ನಡೆದು ಎರಡು ಆನೆಗಳು ರಸ್ತೆಗೆ ಓಡಿ ಬಂದಿದ್ದರಿಂದ ಸಾರ್ವಜನಿಕರು ದಿಗಿಲುಗೊಂಡ ಘಟನೆ ಅರಮನೆ ಮುಂಭಾಗದಲ್ಲಿ ಶುಕ್ರವಾರ ರಾತ್ರಿ ನಡೆಯಿತು.

ಅರಮನೆ ಆವರಣದಲ್ಲಿ ಶುಕ್ರವಾರ ರಾತ್ರಿ 9:30 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಂಜನ್ ಮತ್ತು ಧನಂಜಯ್ಯ ಆನೆಗಳ ನಡುವೆ ಗಲಾಟೆ ಉಂಟಾಗಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯಿಂದ ಆಚೆ ಓಡಿ ಬಂದಿದೆ. ಆದರೂ ಬೆನ್ನು ಬಿಡದ ಧನಂಜಯ ಆನೆ ಕಂಜನ್ ಆನೆಯನ್ನು ಅಟ್ಟಿಸಿಕೊಂಡು ಬಂದಿದೆ. ಇದರಿಂದ ಮತ್ತಷ್ಟು ಬೆದರಿದ ಕಂಜನ್ ಬ್ಯಾರಿಕೇಡ್ ತಳ್ಳಿಕೊಂಡು ಜನರ ಬಳಿ ಹೋಗಿದೆ.

ಈ ವೇಳೆ ಧನಂಜಯ ಅನೆ ಮೇಲೆ ಇದ್ದ ಮಾವುತ ಧೈರ್ಯದಿಂದ ಸಮಯಪ್ರಜ್ಞೆಯಿಂದ ಕೋಪಗೊಂಡಿದ್ದ ಧನಂಜಯನನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಕ್ಷಣ ಕಂಜನ್ ಆನೆಯ ಬಳಿ ತೆರಳಿದ ಮಾವುತ ಕಂಜನ್ ಆನೆಯನ್ನು ಅರಮನೆ ಒಳಗೆ ಕರೆ ತಂದಿದ್ದಾನೆ. ಈ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಮಾವುತರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಆನೆಗಳು ದಿಢೀರನೆ ಓಡಿ ಬಂದದ್ದನ್ನು ಕಂಡ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News