ಮೈಸೂರು | ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Update: 2024-05-16 07:39 GMT

ಮೈಸೂರು : ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣದಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ನೂರುದ್ದೀನ್ ಅಲಿಯಾಸ್ ರಫಿ ಎಂಬವನನ್ನು ಎನ್‌ಐಎ ಅಧಿಕಾರಿಗಳು ನಗರದ ರಾಜೀವ್‌ ನಗರದಲ್ಲಿ ಬುಧವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಆರೋಪಿಯ ಮನೆಯಲ್ಲಿ ಮೊಬೈಲ್, ಪೆನ್‌ಡ್ರೈವ್, ಡ್ರೋನ್, ಮೊದಲಾದವು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರಿನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಹಾಗೂ ಚೆನ್ನೈನಲ್ಲಿರುವ ಯುಎಸ್ ಕಾನ್ಸುಲೇಟ್ ಮೇಲೆ ಸ್ಪೋಟಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮುಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೊದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರರಾಗಿರುವ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿ ಅವರನ್ನು 2014ರಲ್ಲಿ ಬಂಧಿಸಿ ಎನ್‌ಐಎ ಪ್ರಕರಣ ದಾಖಲಿಸಿತ್ತು. ಈ ಆರೋಪಿಗಳಿಗೆ ಭಾರತದ ನಕಲಿ ನೋಟು ಪೂರೈಸುವ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನೂರುದ್ದೀನ್ ವಿರುದ್ದ ಪ್ರಕರಣ ದಾಖಲಿಸಿಕೊಂಡು ಬಂಧಿಸಿಸಲಾಗಿತ್ತು. ಅಲ್ಲದೆ, ಆರೋಪಿ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

2023ರ ಆಗಸ್ಟ್‌ನಲ್ಲಿ ಆರೋಪಿ ನೂರುದ್ದೀನ್ ಜಾಮೀನಿನ ಮೇಲೆ ಹೊರಬಂದಿದ್ದು, ನಂತರ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎನ್ನಲಾಗಿದೆ. ಅಲ್ಲದೆ, ಆರೋಪಿಯ ಪತ್ತೆಗೆ 5 ಲಕ್ಷ ರೂ. ಬಹುಮಾನ ಕೂಡ ಘೋಷಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News