ಮೈಸೂರು | ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

Update: 2025-01-27 13:11 IST
ಮೈಸೂರು | ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

ಜಯಶೀಲಾ

  • whatsapp icon

ಮೈಸೂರು : ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

ಅಂಬಳೆ ಗ್ರಾಮದ ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ.

ಜಯಶೀಲಾ ಅವರು ಐಐಎಫ್ ಎಲ್, ಪೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಪ್ರತಿ ತಿಂಗಳು 20 ಸಾವಿರ ರೂ. ಇಎಂಐ ಕಟ್ಟುತ್ತಿದ್ದರು. ಈ ಮಧ್ಯೆ ಸಾಲ ಮಾಡಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಹೀಗಾಗಿ ಜಯಶೀಲಾ ಅವರು, ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದು, ಜಮೀನಿನಲ್ಲಿ ಜೋಳದ ಗಿಡಕ್ಕೆ ಹೊಡೆಯುವ ವಿಷದ ಮಾತ್ರೆಗಳನ್ನು ನುಂಗಿ ರವಿವಾರ ಮಧ್ಯಾಹ್ನ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಜಯಶೀಲಾ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಠಾಣಾ ಪಿಎಸ್ಐ ರಾಮ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ, ಸೋಮವಾರ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News