ಪಂಡಿತ್ ರಾಜೀವ್ ತಾರಾನಾಥ್ ಅವರ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ಒಪ್ಪಿಗೆ
Update: 2024-05-28 16:58 GMT
ಬೆಂಗಳೂರು : ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ಕ್ಷೇತ್ರದ ದಿಗ್ಗಜರಾದ ಪಂಡಿತ್ ರಾಜೀವ್ ತಾರಾನಾಥ್ ಅವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸುವ ಸಚಿವ ಎಚ್.ಸಿ.ಮಹದೇವಪ್ಪ ಅವರ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ಒಪ್ಪಿಗೆ ಸೂಚಿಸಿದ್ದಾರೆ.
ಮೇ.26 ರಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಪಂಡಿತ್ ರಾಜೀವ್ ತಾರಾನಾಥ್ ಅವರನ್ನು ಭೇಟಿಯಾಗಿ, ಅವರ ಆರೋಗ್ಯ ಚೇತರಿಕೆಗೆ ಶುಭ ಹಾರೈಸಿ, ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಭರವಸೆ ನೀಡಿದ್ದರು.
ಈ ಕುರಿತು ಸಿಎಂಗೆ ಮಾಹಿತಿ ನೀಡಿದ್ದ ಸಚಿವರು ತಾರಾನಾಥ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕೆಂದು ಮೌಖಿಕ ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ ಸರ್ಕಾರವೇ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ ಎಂದು ಪ್ರಕಟನೆ ತಿಳಿಸಿದೆ.