ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಆರಂಭ
Update: 2024-06-06 06:50 GMT
ಮೈಸೂರು : ಮೈಸೂರಿನ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜಿನಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.
ವಿಧಾನ ಪರಿಷತ್ ಚುನಾವಣೆ ಸಂಬಂಧ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ರವಿಶಂಕರ್ .ಜೆ ಅವರ ಸಮ್ಮುಖದಲ್ಲಿ ಗುರುವಾರ ಮತಗಳ ಎಣಿಕೆಗೆ ಭದ್ರತಾ ಕೊಠಡಿ ತೆರೆಯಲಾಯಿತು.
ಪ್ರತಿ ಕ್ಷೇತ್ರಕ್ಕೂ 14 ಟೇಬಲ್ ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್ ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ನಿಯೋಜನೆಗೊಂಡಿದ್ದಾರೆ. ಪ್ರತಿ ಟೇಬಲ್ ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.