ಎಂ.ಲಕ್ಷ್ಮಣ್ ಹೆಸರಿನಲ್ಲಿ ವಿರಾಟ್ ಕೊಹ್ಲಿ ಕುರಿತು ಸುಳ್ಳು ಪೋಸ್ಟ್; ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕೆಪಿಸಿಸಿ ವಕ್ತಾರ
Update: 2025-02-24 21:55 IST

ಎಂ.ಲಕ್ಷ್ಮಣ್
ಮೈಸೂರು: ರವಿವಾರ ದುಬೈ ನಲ್ಲಿ ನಡೆದ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶತಕ ಬಾರಿಸಿ ಭಾರತ ತಂಡದ ಗೆಲುವಿಗೆ ಕಾರಣರಾದ ಬೆನ್ನಲ್ಲೇ "ವಿರಾಟ್ ಕೊಹ್ಲಿ ಒಬ್ಬ ಆರೆಸ್ಸೆಸ್ ಕಾರ್ಯಕರ್ತ" ಎಂಬ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೆಸರಿನಲ್ಲಿ ಹರಿಯಬಿಡಲಾಗಿದ್ದು, ಈ ಬಗ್ಗೆ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿ ಸ್ಪಷ್ಟೀಕರಣ ನೀಡಿದ್ದಾರೆ.
ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಈ ರಾಜ್ಯದ ಜನತೆಗೆ ಬರೀ ಸುಳ್ಳನ್ನ ಹೇಳುತ್ತಾ ಬಂದಿದ್ದಾರೆ. ಅದಕ್ಕೆ ಇದೊಂದು ಸಣ್ಣ ಉದಾಹರಣೆ. ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಯ ಹೆಸರನ್ನು ಬಳಸಿಕೊಂಡು ಹಿಂದೂಗಳ ಭಾವನೆಯನ್ನು ಕೆರಳಿಸುವಂತಹ ಪೋಸ್ಟ್ ಗಳನ್ನು ಹಾಕಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಸದ್ಯದಲ್ಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.