ʼರಾಜ್ಯ ಸಂಗೀತ ವಿದ್ವಾನ್ʼ ಪ್ರಶಸ್ತಿಗೆ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ : ಶಿವರಾಜ ತಂಗಡಗಿ

Update: 2024-10-02 10:06 GMT

ಪಂಡಿತ್ ಬಸವಾಜ ಭಜಂತ್ರಿ

ಮೈಸೂರು : ʼರಾಜ್ಯ ಸಂಗೀತ ವಿದ್ವಾನ್ʼ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವಾಜ ಭಜಂತ್ರಿ ಅವರು ಆಯ್ಕೆಯಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ʼರಾಜ್ಯ ಸಂಗೀತ ವಿದ್ವಾನ್ʼ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅ.3ರ ಗುರುವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ʼಸಂಗೀತ ವಿದ್ವಾನ್ʼ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News