ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು

Update: 2024-06-06 12:01 GMT

ಕೆ.ವಿವೇಕಾನಂದ

ಮೈಸೂರು : ರಾಜ್ಯ ವಿಧಾನ ಪರಿಷತ್‌ಗೆ ನಡೆಯುತ್ತಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೈಸೂರು, ಹಾಸನ, ಚಾಮರಾಜನಗರ ಮತ್ತು ಮಂಡ್ಯ ಒಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಮತದಾನ ನಡೆದಿತ್ತು. 

ಗುರುವಾರ ನಗರದ ಮಹರಾಣಿ ಮಹಿಳಾ ವಿಜ್ಞಾನ‌ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ ಸುತ್ತಿನಿಂದಲೂ ಅಂತರ ಕಾಯ್ದುಕೊಂಡು ಬಂದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ಯದಲ್ಲೇ 7916 ಮತಗಳನ್ನು ಪಡೆದು ಜಯಶೀಲರಾಗಿದ್ದು, ಚುನಾವಾಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ 4658 ಮತಗಳನ್ನು ಪಡೆದರೆ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ 7916 ಮತಗಳನ್ನು ಪಡೆದು 3258 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News