ಮೈಸೂರು | ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ನಿಧನ

Update: 2024-08-17 18:10 GMT

ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು

ಮೈಸೂರು: ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು (70) ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಒಂದು ವಾರಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಶನಿವಾರ ರಾತ್ರಿ 8 ಗಂಟೆ ಸಮಯದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಪ್ರೊ.ಬಿ.ಪಿ.ಮಹೇಶ್ ಚಂದ್ರಗರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಮತ್ತು ಸಂವಹ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಇವರ ಮಾರ್ಗದರ್ಶನದಲ್ಲಿ ನೂರಾರು ವಿದ್ಯಾರ್ಥಿಗಳು ಪಿಎಚ್‌ಡಿ ಪದವಿ ಪಡೆದಿದ್ದಾರೆ.

ವಿಜಯನಗರ ಎರಡನೇ ಹಂತ 8ನೇ ಕ್ರಾಸ್ ನಲ್ಲಿರುವ ಅವರ ಸ್ವಗೃಹದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಹೇಶ್ ಚಂದ್ರಗುರು ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು : ಸಿದ್ದರಾಮಯ್ಯ

"ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News