ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ; ಆರೋಪಿಯ ಪತ್ತೆಗೆ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

Update: 2024-03-02 06:31 GMT

ಮೈಸೂರು, ಮಾರ್ಚ್ 07: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದ ನಂತರ ಸ್ಫೋಟಕ ಇರುವ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು.

ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇದೆಯೇ? ಇದೊಂದು ಭಯೋತ್ಪಾದಕ ಕೃತ್ಯವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು. ತನಿಖೆ ನಡೆಯುತ್ತಿದೆ ಎಂದರು.

 ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ

ವಿಧಾನ ಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿದ ಸಿಎಂ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News