ಮೈಸೂರು | ಕರ್ತವ್ಯಕ್ಕೆ ಅಡ್ಡಿ ಆರೋಪ ಸಂಬಂಧ ಎಫ್‌ಐಆರ್ : ಸ್ನೇಹಮಯಿ ಕೃಷ್ಣ ನಾಪತ್ತೆ

Update: 2024-12-17 13:34 GMT

ಸ್ನೇಹಮಯಿ ಕೃಷ್ಣ

ಮೈಸೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ. ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ಕಾರ್ಯುದರ್ಶಿ ರೂಪ ಅವರು ಸ್ನೇಹಮಯಿ ವಿರುದ್ಧ ದೂರು ನೀಡಿದ್ದರು. ಇದಾದ ಬೆನ್ನಲ್ಲೇ ಬಂಧನದ ಭೀತಿಯಲ್ಲಿ ಸ್ನೇಹಮಯಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅವರು, ಚಾಮುಂಡಿ ಬೆಟ್ಟದಲ್ಲಿ ದೇವತೆಗೆ ಹರಕೆಯಾಗಿ ಬಂದ ಸೀರೆಯನ್ನು ಕದ್ದು ಲಕ್ಷಾಂತರ ರೂಪಾಯಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಕೆ.ಆರ್.ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದೇ ವಿಚಾರದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಆರೋಪ ಮಾಡಿ ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಅವರು ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News