ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದವರ ಮೇಲೆ ಕಠಿಣ ಕ್ರಮ: ಡಿಸಿಎಂ‌ ಡಿ.ಕೆ.ಶಿವಕುಮಾರ್

Update: 2025-02-12 14:35 IST
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದವರ ಮೇಲೆ ಕಠಿಣ ಕ್ರಮ: ಡಿಸಿಎಂ‌ ಡಿ.ಕೆ.ಶಿವಕುಮಾರ್
  • whatsapp icon

ಮೈಸೂರು,ಫೆ. 12: ಉದಯಗಿರಿ ಪೊಲೀಸ್ ಠಾಣೆ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ಆಗತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಳಿಕ ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉದಯಗಿರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಮಯ ಪ್ರಜ್ಞೆ ಮೆರೆದು ಬೇಗನೆ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ನಾನು ಕೂಡ ವಿಡಿಯೋ ನೋಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲರೂ ಕೂಡ ಸಣ್ಣ ಹುಡುಗುರು ಅಂತ ಹೇಳಿದ್ದಾರೆ. ಪೊಲೀಸರ ಮೇಲಿನ ಹಲ್ಲೆಯನ್ನು ಸಹಿಸುವುದಿಲ್ಲ. ಕ್ರಮಕ್ಕೆ ಈಗಾಗಲೇ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಉದಯಗಿರಿ ಪ್ರಕರಣದಲ್ಲಿ ಪೊಲೀಸರ ತಪ್ಪು ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದ್ದಾರೆ. ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಅವರು ಸಚಿವರಿದ್ದಾರೆ. ಈ ಬಗ್ಗೆ ಸಿಎಂ ನೋಡಿಕೊಳ್ಳುತ್ತಾರೆ.  ಪೊಲೀಸರು ಉದಯಗಿರಿ ಪ್ರಕರಣದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣ ಮಾಡಿದ್ದು ಸರಿಯಾಗಿದೆ ಎಂದು ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಸಚಿವ ರಾಜಣ್ಣ ದೆಹಲಿ ಭೇಟಿ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ‌ಶಿವಕುಮಾರ್, ಸಚಿವ ರಾಜಣ್ಣ ದೊಡ್ಡವರು. ನಾನು ಅವರ ಬಗ್ಗೆ ಮಾತನಾಡಲ್ಲ. ನಾನು ಪಕ್ಷದ ಸಣ್ಣ ಕಾರ್ಯಕರ್ತ ಎಂದು ರಾಜಣ್ಣಗೆ ಪರೋಕ್ಷವಾಗಿ ಕುಟುಕಿದರು.

ಕಾವೇರಿ ನದಿ ಪವಿತ್ರವಾಗಿದೆ, ಸಂಗಮದ ನೀರು ಶುದ್ಧವಾಗಿದೆ. ಹಾಗಾಗಿ ಬಜೆಟ್ ನಲ್ಲಿ ತ್ರಿವೇಣಿ ಸಂಗಮ ಅಭಿವೃದ್ಧಿಗೆ ಹಣ ಇಡುತ್ತೇವೆ. ಅಭಿವೃದ್ದಿ ಪಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News